ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೊಹ್ಲಿಯ 53ನೇ ಏಕದಿನ ಶತಕ ಹಾಗೂ ರುತುರಾಜ್ ಗಾಯಕ್ವಾಡ್ ಸಿಡಿಲಬ್ಬರದ ಶತಕ ಬಾರಿಸಿದರೂ ಕಳಪೆ ಫೀಲ್ಡಿಂಗ್, ಬೌಲಿಂಗ್ ನಿಂದ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು ಉಂಟಾಗಿದೆ.
ದಕ್ಷಿಣ ಆಫ್ರಿಕಾ ತಂಡ 4 ವಿಕೆಟ್‌ಗಳಿಂದ ಭಾರತ ತಂಡವನ್ನು ಸೋಲಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿದೆ. ಇದರಿಂದಾಗಿ ಡಿಸೆಂಬರ್ 6ರ ಶನಿವಾರದಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಕುತೂಹಲ ಮೂಡಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ (102 ರನ್, 93 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ರುತುರಾಜ್ ಗಾಯಕ್ವಾಡ್ (105 ರನ್, 83 ಎಸೆತ, 12 ಬೌಂಡರಿ, 2 ಸಿಕ್ಸರ್) ಬೆನ್ನೇರಿತು. ಇದರಿಂದಾಗಿ ನಿಗದಿತ ಓವರ್‌ಗಳಲ್ಲಿ 5 ವಿಕೆಟ್‌ಗೆ 358 ರನ್‌ಗ ಬೃಹತ್ ಮತ್ತ ಪೇರಿಸಿತ್ತು.
ಪ್ರತಿಯಾಗಿ ದಕ್ಷಿಣ ಆಫ್ರಿಕಾ ತಂಡ ಆರಂಭಿಕ ಆಟಗಾರ ಏಡೆನ್ ಮಾರ್ಕ್‌ರಮ್ (110 ರನ್, 98 ಎಸೆತ, 10 ಬೌಂಡರಿ, 1 ಸಿಕ್ಸರ್) ಶತಕ ಹಾಗೂ ಮ್ಯಾಥ್ಯೂ ಬ್ರೀಟ್ಜ್‌ಕೇ (68 ರನ್, 64 ಎಸೆತ, 5 ಬೌಂಡರಿ) ಹಾಗೂ ಡವಾಲ್ಡ್ ಬ್ರೇವಿಸ್ (54 ರನ್, 34 ಎಸೆತ, 1 ಬೌಂಡರಿ, 5 ಸಿಕ್ಸರ್) ಅರ್ಧಶತಕಗಳ ನೆರವಿನಿಂದ 49.2 ಓವರ್‌ಗಳಲ್ಲಿ 6 ವಿಕೆಟ್‌ಗೆ 359 ರನ್ ಬಾರಿಸಿ ಗೆಲುವು ಕಂಡಿತು.

