ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಗೆ ನಾಳೆ ಸಿಎಂ ಬೊಮ್ಮಾಯಿ ಚಾಲನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಗೆ ನಾಳೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಬೆಳಗಾವಿಯಲ್ಲಿಸುವರ್ಣ ಸೌಧದ ಆವರಣದಲ್ಲಿ ನಾಳೆ ಬೆಳಗ್ಗೆ 10:30 ಕ್ಕೆ ಮಹಾತ್ಮ ಗಾಂಧೀಜಿ, ಡಾ ಬಿ.ಆರ್ , ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಸಿಎಂ ಬೊಮ್ಮಾಯಿ ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ಮತ್ತಿತರರು ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!