ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂದುಕೂರು ಕಾಲ್ತುಳಿತ ಘಟನೆಯ ಬಗ್ಗೆ ತಿಳಿದ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ದುರಂತದಿಂದ ತೀವ್ರ ನೊಂದಿದ್ದೇನೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಯಿತು.
ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ರೂ. 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಕಂದುಕೂರು ಕಾಲ್ತುಳಿತ ಘಟನೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆಯನ್ನು ವಿಶೇಷ ತಂಡಗಳ ನೇತೃತ್ವದಲ್ಲಿ ಪೂರ್ಣಗೊಳಿಸಲಾಗಿದೆ. ನಂತರ ಎಂಟು ಆಂಬ್ಯುಲೆನ್ಸ್‌ಗಳ ಮೂಲಕ ಮೃತದೇಹಗಳನ್ನು ಅವರವರ ಊರುಗಳಿಗೆ ಕೊಂಡೊಯ್ಯಲಾಗುವುದು. ಟಿಡಿಪಿ ವತಿಯಿಂದ ಮೃತರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗುತ್ತಿದೆ. ಸದ್ಯ ಚಂದ್ರಬಾಬು ಕಂದುಕೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ.