ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ.ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ ಯಾವುದೇ ಅವಕಾಶವಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ವಿಧಿವಿಜ್ಞಾನ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ರಾತ್ರಿಯಿಡೀ ಸ್ಥಳದಲ್ಲಿಯೇ ಇತ್ತು.ಮೃತ ನಾಲ್ವರು ವೆಂಕಟೇಶ್ವರ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದೆ. ವಿಶ್ವವಿದ್ಯಾಲಯದ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

