ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮೀ ಕೊಲೆ ಪ್ರಕರಣದಲ್ಲಿ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಕೊನೆಗೂ ಟಿವಿ ಭಾಗ್ಯ ದೊರೆತಿದೆ. ಬೆಂಗಳೂರಿನ 57ನೇ CCH ನ್ಯಾಯಾಲಯ ದರ್ಶನ್ ಇರೋ ಬ್ಯಾರಕ್ ನಲ್ಲಿ ಟಿವಿ ಅಳವಡಿಸುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಡಿಸೆಂಬರ್ 17 ರಂದು ಸಾಕ್ಷಿಗಳಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ತಂದೆ ಹಾಗು ತಾಯಿಗೆ ಸಮನ್ಸ್ ಜಾರಿ ಮಾಡಿದೆ.

