ದುಡ್ಡು ಕಟ್ಟದೇ ಅಡ್ಮಿಟ್ ಮಾಡಿಕೊಳ್ಳೋದಿಲ್ಲ, ರಸ್ತೆಯಲ್ಲೇ ಗರ್ಭಿಣಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೆರಿಗೆ ನೋವು ಕಾಣಿಸಿಕೊಂಡಿದ್ದ ಗರ್ಭಿಣಿಗೆ ಚಿಕಿತ್ಸೆ ಸಿಗದೇ ಸ್ಥಳದಲ್ಲೇ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಿಹಾರದಲ್ಲಿ ನಡೆದಿದೆ.

1,500 ರೂಪಾಯಿ ನೀಡಿದ ನಂತರವೇ ಗರ್ಭಿಣಿಯನ್ನು ಅಡ್ಮಿಟ್ ಮಾಡಿಕೊಳ್ಳಲಾಗುತ್ತದೆ ಎಂದು ಸಿಬ್ಬಂದಿ ಹೇಳಿದ್ದು, ಬಡ ಕುಟುಂಬದ ಬಳಿ ಅಷ್ಟೊಂದು ಹಣ ಇರಲಿಲ್ಲ. ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ, ತಾಯಿ ಮಗುವನ್ನು ದಯವಿಟ್ಟು ಉಳಿಸಿಕೊಡಿ ಎಂದು ಕುಟುಂಬ ಅಂಗಲಾಚಿದರೂ ಹಣ ಪಾವತಿ ಮಾಡದೇ ಅಡ್ಮಿಟ್ ಮಾಡಿಕೊಳ್ಳುವುದಿಲ್ಲ ಎಂದು ಆಸ್ಪತ್ರೆ ತಿಳಿಸಿದೆ. ಮತ್ತೊಂದು ಆಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ದಿದ್ದಾರೆ. ಅಲ್ಲಿಯೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

ರಾತ್ರಿಯಿಡೀ ಆಸ್ಪತ್ರೆಗಳಿಗೆ ಕುಟುಂಬ ಅಲೆದಾಡಿದ್ದು, ಗರ್ಭಿಣಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೊನೆಗೆ ಖಾಸಗಿ ಆಸ್ಪತ್ರೆಯೊಂದು ಗರ್ಭಿಣಿಯನ್ನು ದಾಖಲಿಸಿಕೊಂಡು ಪ್ರಾಥಮಿಕ ಚಿಕಿತ್ಸೆ ನೀಡಿದೆ.

ಅಲ್ಲಿಯೂ ಸ್ವಲ್ಪ ಹಣ ಪಡೆದು ಆಕ್ಸಿಜನ್ ಮಾಸ್ಕ್ ಹಾಕಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಹಣವಿಲ್ಲದೆ ವೈದ್ಯರು ನಿರಾಕರಿಸಿದ್ದಾರೆ. ನಂತರ ಆಂಬುಲೆನ್ಸ್‌ಗೆ ತೆರಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಕೇಳಿದ್ದಾರೆ. ಹಣ ನೀಡಿದರೆ ಮಾತ್ರ ಕರೆದುಹೋಗುತ್ತೇವೆ ಎಂದು ಆಂಬುಲೆನ್ಸ್ ಸಿಬ್ಬಂದಿ ಹೇಳಿದ್ದಾರೆ.

ಇದೆಲ್ಲದರಲ್ಲೂ ಸಾಕಷ್ಟು ಸಮಯ ವ್ಯರ್ಥವಾಗಿದ್ದು, ಗರ್ಭಿಣಿ ಆರೋಗ್ಯ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ. ತುಂಬಾ ಸಮಯದ ನಂತರ ಖಾಸಗಿ ಆಸ್ಪತ್ರೆಗೆ ಗರ್ಭಿಣಿಯನ್ನು ದಾಖಲಿಸಲಾಗಿದೆ. ಅಷ್ಟೊತ್ತಿಗಾಗಲೇ ಗರ್ಭಿಣಿ ಹಾಗೂ ಮಗು ಮೃತಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here