Friday, December 5, 2025

NEKRTC ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ; ಯುವತಿ ಸ್ಥಳದಲ್ಲೇ ದಾರುಣ ಸಾವು

ಹೊಸದಿಗಂತ ಕಲಬುರಗಿ:

ಕಲಬುರಗಿ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ದ್ವಿಚಕ್ರ ವಾಹನವೊಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಇಕೆಆರ್ಟಿಸಿ) ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿಯೊಬ್ಬಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾಳೆ. ಈ ಘಟನೆ ಯಡ್ರಾಮಿ ತಾಲೂಕಿನ ರಾಸಣಗಿ ಕ್ರಾಸ್ ಬಳಿ ನಡೆದಿದೆ.

ಸಾವನ್ನಪ್ಪಿದ ದುರ್ದೈವಿ ಯುವತಿಯನ್ನು ಭೂಮಿಕಾ ಹಂಗರಗಾ (20) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅಮೋಘ ಸಿದ್ದನ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜೇವರ್ಗಿ ಪಟ್ಟಣದಿಂದ ಸ್ವಗ್ರಾಮಕ್ಕೆ ಹೋಗುತ್ತಿದ್ದ ಈ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಎನ್ಇಕೆಆರ್ಟಿಸಿ ಸಾರಿಗೆ ಬಸ್ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವತಿ ಭೂಮಿಕಾ ಹಂಗರಗಾ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ರಸ್ತೆ ಅಪಘಾತದ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

error: Content is protected !!