ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ಸ್ವತಃ ಪ್ರಧಾನಿ ಮೋದಿ ಸ್ವಾಗತಿಸಿದರು.
ಗುರುವಾರ ಸಂಜೆ ದೆಹಲಿಯ ಪಾಲಮ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದರು.
ಮೋದಿ ಇಂದು ರಾತ್ರಿ ಪುಟಿನ್ ಅವರಿಗಾಗಿ ವಿಶೇಷ ಔತಣ ಕೂಟ ಆಯೋಜಿಸಿದ್ದಾರೆ. 2022ರ ಫೆಬ್ರವರಿಯಲ್ಲಿ ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪುಟಿನ್ ಅವರ ಮೊದಲ ಭಾರತ ಭೇಟಿ ಇದಾಗಿದೆ.

