ಹೊಸದಿಗಂತ ವರದಿ ಬಾಗಲಕೋಟೆ:
ಟ್ರ್ಯಾಕ್ಟರ್ ಚಾಲಕರಿಬ್ಬರ ಹುಡುಗಾಟಿಕೆಯಿಂದಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಮೃತ ಪಟ್ಟು, ಇಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ.
ಗೋವಿಂದ್ ಪಾಟೀಲ್ (20), ಹನಮಂತ್ ಬೊಮ್ಮಕ್ಕನವರ್ (20) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಹನಮಂತ ಹುನಸಿಕಟ್ಟಿ ಅವರಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿ ಆಗಿದ್ದು, ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋದಾಗ ದುರಂತ ಸಂಭವಿಸಿದೆ.
ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಇನ್ನೊಂದು ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ರಭಸಕ್ಕೆ ಮುಂದಿನ ಟ್ರ್ಯಾಕ್ಟರ್ ಪಲ್ಟಿಯಾಗಿದೆ.ಗಂಭೀರ ಗಾಯಗೊಂಡ ಇಬ್ಬರನ್ನ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ಮೂವರ ಕಾಲಿಗೆ ಗಂಭೀರವಾಗಿ ಗಾಯವಾಗಿದೆ.ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.