ದಲಿತ ವಿರೋಧಿಯಲ್ಲದ ಬಿಜೆಪಿ ಮೇಲೆ ಕಾಂಗ್ರೆಸ್ ಸುಳ್ಳು ಆರೋಪ: ಸಿ.ಟಿ. ರವಿ

ಹೊಸದಿಗಂತ ವರದಿ ಮೈಸೂರು :

ಬಿಜೆಪಿ ಎಂದೂ ಕೂಡ ದಲಿತರ ವಿರೋಧಿಯಾಗಿಲ್ಲ. ಆದರೂ ಕಾಂಗ್ರೆಸ್ ನಾಯಕರು ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಮೈಸೂರಿನ ಲಲಿತಮಹಲ್ ಪ್ಯಾಲೇಸ್ ನಲ್ಲಿ ನಡೆದ ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿಕೆ.
ಕಾಂಗ್ರೆಸ್ ಪಕ್ಷ ದಲಿತರನ್ನು ಓಟ್ ಬ್ಯಾಂಕ್ ಮಾಡಿಕೊಂಡು ಬಂದಿತ್ತು.

ದಲಿತರ ಉದ್ಧಾರ ಮಾಡಲು ಕಾಂಗ್ರೆಸ್ ಮುಂದಾಗಲಿಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ಸಿಗರು. ಅಂಬೇಡ್ಕರ್ ಬದುಕಿದ್ದಷ್ಟು ದಿನ ಅವರನ್ನು ಕಾಂಗ್ರೆಸ್ ನಿರಂತರವಾಗಿ ತುಳಿಯುವ ಕೆಲಸ ಮಾಡಿತು. ಅವರ ನಿಧನಾನಂತರ ದಲಿತರ ಓಟ್ ಗಾಗಿ ಅಂಬೇಡ್ಕರ್ ಗುಣಗಾನ ಮಾಡಲಾರಂಭಿಸಿತು. ಆದರೆ ಬಿಜೆಪಿ ಎಂದೂ ಕೂಡ ದಲಿತರ ವಿರೋಧಿಯಾಗಿಲ್ಲ.

ಅಂಬೇಡ್ಕರ್ ಗೆ ಅಪಮಾನ ಆಗುವ ರೀತಿ ಬಿಜೆಪಿ ನಡೆದುಕೊಂಡಿಲ್ಲ. ದಲಿತರ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದಲಿತರ ಉದ್ಧಾರಕ್ಕಾಗಿ ಬಿಜೆಪಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮೈಸೂರಿನಲ್ಲಿ ಹೇಳಿಕೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!