July 15, 2026
Wednesday, July 15, 2026
spot_img

ಒಂದೇ ಕಾರಿನಲ್ಲಿ ಮೋದಿ,ಪುಟಿನ್ ಪ್ರಯಾಣ: ನನ್ನ ಸ್ನೇಹಿತನನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದ ನಮೋ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ವಿಮಾನ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು.

ಗುರುವಾರ ಸಂಜೆ 6:15ಕ್ಕೆ ಪಾಲಂ ವಿಮಾನ ನಿಲ್ದಾಣಕ್ಕೆ ಪುಟಿನ್‌ ಬಂದಿಳಿದರು. ಪುಟಿನ್‌ಗೆ ಪ್ರಧಾನಿ ಮೋದಿ ಅಪ್ಪುಗೆ ಆತ್ಮೀಯ ಸ್ವಾಗತ ಕೋರಿದರು. ರಷ್ಯಾ ಅಧ್ಯಕ್ಷರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಬಳಿಕ ಒಂದೇ ಕಾರಿನಲ್ಲಿ ಮೋದಿ ಮತ್ತು ಪುಟಿನ್‌ ಪ್ರಯಾಣಿಸಿದರು.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಇಂದು ಸಂಜೆ ಮತ್ತು ನಾಳೆ ನಮ್ಮ ಸಂವಾದಗಳನ್ನು ಎದುರು ನೋಡುತ್ತಿದ್ದೇನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡಿದೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !