ಹೊಸ ದಿಗಂತ ಡಿಜಿಟಲ್ ಡೆಸ್ಕ್:
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಹುದೊಡ್ಡ ಯಶಸ್ಸು ಕಂಡಿದೆ . ಈ ಹಿನ್ನೆಲೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಹರಿಕೆ ತೀರಿಸಲು ದೈವಸ್ಥಾನಕ್ಕೆ ಬಂದಿದ್ದಾರೆ.
ಮಂಗಳೂರಿನಲ್ಲಿ ‘ಕಾಂತಾರ’ ತಂಡದಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಮಂಗಳೂರಿನ ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ. ರಿಷಬ್ ಶೆಟ್ಟಿ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕೂಡ ಸಾಥ್ ನೀಡಿದ್ದಾರೆ.
ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಚಿತ್ರತಂಡ ಭಾಗಿಯಾಗಿದೆ. ರಿಷಬ್ ಶೆಟ್ಟಿ ಅವರು ಪತ್ನಿ ಹಾಗೂ ಮಕ್ಕಳ ಜೊತೆ ನೇಮೋತ್ಸವಕ್ಕೆ ಆಗಮಿಸಿದ್ದಾರೆ.
ಕಳೆದ ಎಪ್ರಿಲ್ ತಿಂಗಳಲ್ಲಿ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಹಾಗೂ ಕುಟುಂಬದವರು ಭಾಗಿಯಾಗಿದ್ದರು. ಮಗನ ಹುಟ್ಟುಹಬ್ಬದ ದಿನ ಬಾರೆಬೈಲು ದೇವಸ್ಥಾನಕ್ಕೆ ರಿಷಬ್ ಆಗಮಿಸಿದ್ದರು. ಇಂದು ಅದೇ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಅವರ ಕುಟುಂಬದಿಂದ ಹರಕೆ ನೇಮೋತ್ಸವ ಸಲ್ಲಿಕೆ ಮಾಡಲಾಗಿದೆ.

