ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡ್ ಜೋಶಿಮಠದಲ್ಲಿ ಕಳೆದ ಎರಡು ದಿನಗಳಿಂದ ಭೂ ಕುಸಿತ ಉಂಟಾಗುತ್ತಿದ್ದು, ಈ ಹಿನ್ನೆಲೆ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ.
ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿ ಜೋಶಿಮಠದಲ್ಲಿನ ಪರಿಸ್ಥಿತಿ ಬಗ್ಗೆ ವಿಚಾರಿಸಿದರು. ಜನರ ಸುರಕ್ಷತೆ ಮತ್ತು ಪುನರ್ವಸತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾಗಿ ಧಾಮಿ ಹೇಳಿದ್ದಾರೆ.
ಜೋಶಿಮಠದಲ್ಲಿನ ಪರಿಸ್ಥಿತಿಯನ್ನು ವಿಶ್ಲೇಷಿಸಲಾಗುತ್ತಿದೆ. ಉತ್ತರಾಖಂಡ್ ನ ಇತರ ಪಟ್ಟಣಗಳ ಬಗ್ಗೆಯೂ ಪರಿಸ್ಥಿತಿಯನ್ನು ಅವಲೋಕಿಸಲಾಗುವುದು ಎಂದ ಅವರು, ಜೋಶಿ ಮಠ ರಕ್ಷಣೆಗಾಗಿ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ್ ಸಿಎಂ ಹೇಳಿದರು.