ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಳಿಗಾಲದಲ್ಲಿ ಬಿಸಿಬಿಸಿಯಾದ ಚಿಕನ್, ಮೊಟ್ಟೆ ಡಿಶ್‌ಗಳನ್ನು ಮನೆಯಲ್ಲಿ ಮಾಡಿ ತಿನ್ನೋದು ಕಾಮನ್. ಇದರ ಜೊತೆಗೆ ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್ ಕೂಡ ಬಂದಿದೆ. ಕೇಕ್ ತಯಾರಿಕೆಗೆ ಮೊಟ್ಟೆ ಅತ್ಯಗತ್ಯವಾಗಿದೆ. ಆದರೆ ಬೆಂಗಳೂರಿನಲ್ಲಿ ಮೊಟ್ಟೆ ಪೂರೈಕೆ ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ ಮೊಟ್ಟೆ ಪೂರೈಕೆ ಕಡಿಮೆಯಾಗಿದೆ. ಜೊತೆಗೆ ಕಳೆದ ವರ್ಷ ಹಕ್ಕಿ ಜ್ವರ ಬಂದಿದ್ದರಿಂದ ಕೋಳಿಗಳ ಸಾಕಾಣಿಕೆ ಕಡಿಮೆಯಾಗಿತ್ತು. ಈ ಎಲ್ಲಾ ಕಾರಣಗಳಿಂದ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಲ್ಲಿ ಬೇಡಿಕೆಗೆ ತಕ್ಕಂತೆ ಮೊಟ್ಟೆಗಳ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಮೊಟ್ಟೆಗಳ ಕೊರತೆ ಉಂಟಾಗಿದೆ. ಸದ್ಯ ಪ್ರತಿನಿತ್ಯ ಬೆಂಗಳೂರಲ್ಲಿ 1.10 ಕೋಟಿ ಮೊಟ್ಟೆಗಳಿಗೆ ಬೇಡಿಕೆ ಇದೆ. ಆದರೆ 30 ರಿಂದ 40 ಲಕ್ಷ ಮೊಟ್ಟೆಗಳ ಕೊರತೆ ಎದುರಾಗಿದೆ ಎಂದು ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎನ್ ನಾಗರಾಜ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 5 ರೂಪಾಯಿ ಇದ್ದ ಮೊಟ್ಟೆ ಬೆಲೆ ಇದೀಗ ದುಬಾರಿಯಾಗಿದ್ದು, ಒಂದು ಮೊಟ್ಟೆಗೆ 7 ರಿಂದ 8 ರೂಪಾಯಿ ಆಗಿದೆ. ತಮಿಳುನಾಡಿನ ನಾಮಕಲ್ನಿಂದ ಪ್ರತಿನಿತ್ಯ 79 ಲಕ್ಷ ಮೊಟ್ಟೆ ಪೂರೈಕೆಯಾಗುತ್ತಿತ್ತು. ಸದ್ಯ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಕರ್ನಾಟಕಕ್ಕೆ ಮೊಟ್ಟೆ ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ.

