ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಕುಲ್ತಿಯಲ್ಲಿ ಕಲ್ಲಿದ್ದಲು ಛಾವಣಿ ಕುಸಿದ ಪರಿಣಾಮ ಹಲವು ಕಾರ್ಮಿಕರು ಸಿಲುಕಿದ್ದಾರೆ.
ಸ್ಥಳಕ್ಕೆ ಗಣಿ ಅಧಿಕಾರಿಗಳು ಮತ್ತು ಪೊಲೀಸರು ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಈ ಗಣಿ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ಗೆ (ಬಿಸಿಸಿಎಲ್) ಸೇರಿದ್ದಾಗಿದೆ.
ಸದ್ಯ ಗಣಿ ಕುಸಿತದಲ್ಲಿ ಎಷ್ಟು ಮಂದಿ ಸಿಲುಕಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.