ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಸರಣಿಯಿಂದ ಹೊರಬಿದ್ದಿದ್ದಾರೆ ಎನ್ನಲಾಗಿದೆ.
ಲಂಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಕಡೆಯ ನಿರ್ಧಾರದಲ್ಲಿ ಅವರನ್ನು ಸರಣಿಯಿಂದ ಕೈಬಿಡಲಾಗಿದೆ. ಜ.೩ರಂದು ಆಯ್ಕೆಯಾದ ಪಟ್ಟಿಯಲ್ಲಿ ನುಮ್ರಾ ಹೆಸರಿತ್ತು. ಆದರೆ ಸೆಲೆಕ್ಷನ್ ಆದ ಆರು ದಿನದಲ್ಲಿ ಮತ್ತೆ ತಂಡದಿಂದ ಅವರನ್ನು ಕೈಬಿಡಲಾಗಿದೆ.