ಹೊಸದಿಗಂತ ವರದಿ ಮಂಡ್ಯ :
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಮೂರು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಇದಕ್ಕೂ ಮುನ್ನ ಕೃಷಿ ಮೇಳದಲ್ಲಿ ಆಯೋಜಿಸಲಾಗಿದ್ದ ವಿವಿಧ ಬೆಳೆಗಳ ತಾಕುಗಳು, ಮತ್ತು ಪ್ರದರ್ಶನ ಮಳಿಗೆಗಳು ಹಾಗೂ ಹೊಸದಾಗಿ ಸಂಶೋಧಿಸಿರುವ ಭಿತ್ತನೆ ಬೀಜಗಳನ್ನು ಬಿಡುಗಡೆಗೊಳಿಸಿದರು.
ಬಳಿಕ ಕೃಷಿ ವಿವಿ ಹೊರತಂದಿರುವ ಕೃಷಿಗೆ ಸಂಬಂಧಿಸಿದ ಕೃಷಿ ಕೈಪಿಡಿಯನ್ನು ಲೋಕಾರ್ಪಣೆ ಮಾಡಿದರು.
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರು, ವಿವಿಧ ನಿಗಮಗಳ ಅಧ್ಯಕ್ಷರು, ಮುಖಂಡರು ಇದ್ದರು.
ಮೂರು ದಿನಗಳ ಕಾಲ ನಡೆಯುವ ಕೃಷಿ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

