ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 7 ಸಹಾಯಕ ಲೈಬ್ರರಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಜನವರಿ 6,2023 ರಿಂದ ಜನವರಿ 20,2023ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಪಿ.ಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.
ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಆನ್ಲೈನ್/ಆಫ್ಲೈನ್ ಮೂಲಕ ನೇರ ಸಂದರ್ಶನವನ್ನು ನಡೆಸಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/-ರಿಂದ 36,000/-ರೂಗಳ ವರೆಗಿನ ವೇತನವನ್ನು ನೀಡಲಾಗುವುದು.
ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://bangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ ೬,202೩ ರಿಂದ ಜನವರಿ 20,2022ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ:
Assistant Registrar, Establishment Section-I, Administrative Block, Bangalore University, Jnana Bharathi Campus, Bengaluru-560056.