ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ… ಜನವರಿ 12ರಂದು ಕಲಬುರಗಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು.
ಕಲಬುರಗಿಯ ಸರ್ಕಾರಿ ಐ.ಟಿ.ಐ ಕಾಲೇಜು ಹಿಂದೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 12ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 2ರ ವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳು ಮತ್ತು ತಮ್ಮ ಸ್ವವಿವರವನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ತಿಳಿಸಲಾಗಿದೆ.