ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಂಸದ ಸಂತೋಝ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂತೋಖ್ ಸಿಂಗ್ ಚೌಧರಿ ನಿಧನರಾಗಿದ್ದಾರೆ. ರಾಹುಲ್ ಗಾಂಧಿ ಜತೆ ರಸ್ತೆಯಲ್ಲಿ ಹೆಜ್ಜೆ ಹಾಕಿದ್ದ ಸಿಂಗ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.