ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 19ರಂದು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದು, ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆ ನಡೆದಿದೆ.
ಮುಂಬರುವ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಇದು ಎರಡನೇ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಮಾಲ್ಖೇಡ್‌ನಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ತಾಂಡಾಗಳ ನಿವಾಸಿಗಳಿಗೆ ಆಸ್ತಿ ದಾಖಲೆಗಳನ್ನು ವಿವರಿಸಲಿದ್ದಾರೆ.
ರಾಜ್ಯದ ಇತಿಹಾಸಲದಲ್ಲೇ ಮೊದಲ ಬಾರಿ 51,900 ತಾಂಡಾ ನಿವಾಸಿಗಳಿಗೆ ದಾಖಲೆ ವಿತರಿಸಲಾಗುತ್ತದೆ. ಹೈದರಾಬಾದ್-ಕರ್ನಾಟಕ ಪ್ರದೇಶದ ರಾಯಚೂರು, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.