ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿಯ ಸ್ಪರ್ಶ: ವಿಸ್ಮಯ ಕ್ಷಣವನ್ನು ಕಣ್ತುಂಬಿಕೊಂಡ ಭಕ್ತರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವರ್ಷದ ಮೊದಲ ಸಂಕ್ರಾಂತಿಯ ಶುಭದಿನದಂದು ಬೆಂಗಳೂರಿನ ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ (Gavigangadhareshwara Temple) ಸೂರ್ಯ ರಶ್ಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿದ್ದು, ಈ ವಿಸ್ಮಯ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವಈ ವಿಸ್ಮಯವನ್ನು ನೋಡಲು ಭಕ್ತ ಸಾಗರವೇ ನೆರೆದಿರುತ್ತದೆ. ಸೂರ್ಯ ರಶ್ಮಿ ಸಂಜೆ   ಗರ್ಭಗುಡಿಯ ನಂದಿಯ ಬೆನ್ನಿನ ಭಾಗವನ್ನು ಸ್ಪರ್ಶಿಸಿದ್ದು, ಬಳಿಕ ನಂದಿಯ ಕೊಂಬುಗಳ ಮಧ್ಯೆ ಹಾದು ಲಿಂಗವನ್ನು ತಲುಪಿದೆ. ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶಿಸುತ್ತಲೇ ಗಂಗಾಧರನಿಗೆ ದೀಪಾರಾಧನೆ ಪ್ರಾರಂಭವಾಗಿದೆ. ಸಂಜೆ 5.20ರಿಂದ 5.23ರ ಸಮಯದಲ್ಲಿ ಒಟ್ಟು 3 ನಿಮಿಷ 12 ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಸ್ಪರ್ಶವಾಗಿದೆ.

ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಪಥ ಬದಲಾಯಿಸುತ್ತಿದ್ದಂತೆ ಗವಿಗಂಗಾಧರೇಶ್ವರನ ಮೇಲೆ ಸೂರ್ಯನ ಕಿರಣಗಳು ಬೀಳುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!