ಹೊಸದಿಗಂತ ಡಿಜಿಟಲ್ ಡೆಸ್ಕ್ :
ಭಾರತೀಯ ಜೀವ ವಿಮಾ ನಿಗಮದಲ್ಲಿ 300 ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಜನವರಿ 1,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 53,600/- ರಿಂದ 1,02,090/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿದಾರರನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜನವರಿ 31,2023ರೊಳಗೆ ಅರ್ಜಿಯನ್ನು ಹಾಕಬಹುದು.