ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ವಿವರವಾದ ಹಣಕಾಸು ಮತ್ತು ವಹಿವಾಟಿನ ಮಾಹಿತಿ ಕೋರಿ ಡಿ.ಕೆ. ಶಿವಕುಮಾರ್ ಅವರಿಗೆ ನೊಟೀಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ನೊಟೀಸ್ ಪ್ರಕಾರ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಅಕ್ಟೋಬರ್ 3 ರಂದು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಪ್ರಮುಖ ಮಾಹಿತಿ ಹೊಂದಿದ್ದಾರೆ ಎನ್ನಲಾಗಿದೆ.
ಡಿಸೆಂಬರ್ 19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಕೋರಲಾದ ದಾಖಲೆಗಳನ್ನು ಸಲ್ಲಿಸಲು ಅವರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

