ಹೊಸದಿಗಂತ ಡಿಜಿಟಲ್ ಡೆಸ್ಕ್ :
ಲೋಕಸಭೆ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಾಲಿದ್ದು, ಅದಿಕಾರಕ್ಕೇರಲು ರಣತಂತ್ರ ರೂಪಿಸುತ್ತಿದೆ.
ಅದೇ ರೀತಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಭಾರತ್ ರಾಷ್ಟ್ರ ಸಮಿತಿ (BRS Public Meeting)ಯ ಮೊದಲ ಸಾರ್ವಜನಿಕ ಸಭೆ ಆಯೋಜಿಸಿದ್ದು, ಮೂರು ರಾಜ್ಯಗಳ ಮುಖ್ಯಮಂತ್ರಿಗಳು, ಬೇರೆ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ.
ಈ ಸಭೆಯ ಮೂಲಕ ಕ ಬಿಜೆಪಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ತೃತೀಯ ರಂಗದ ರಚನೆ ಕುರಿತು ಘೋಷಿಸಲಾಗುತ್ತದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಹೈದರಾಬಾದ್ನಿಂದ 200 ಕಿ.ಮೀ ದೂರದ ಖಮ್ಮಮ್ನಲ್ಲಿ ಬಿಆರ್ಎಸ್ ಮೊದಲ ಸಾರ್ವಜನಿಕ ಸಭೆ ಆಯೋಜಿಸಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿ ಹಲವು ನಾಯಕರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನುಸೋಲಿಸಬೇಕು ಎಂಬುದು ಪ್ರತಿಪಕ್ಷಗಳ ಗುರಿಯಾಗಿದೆ. ಇದರ ದಿಸೆಯಲ್ಲಿ ಪ್ರಾದೇಶಿಕ ಪಕ್ಷಗಳೆಲ್ಲ ಒಗ್ಗೂಡಿ ಬಿಜೆಪಿಯನ್ನು ಮಣಿಸಲು ತೃತೀಯ ರಂಗ ರಚಿಸಲಾಗುತ್ತದೆ ಎಂದೇ ಹೇಳಲಾಗುತ್ತಿದೆ.