ಹಣಕಾಸು ಸಚಿವಾಲಯದ ಸೂಕ್ಷ್ಮ ಮಾಹಿತಿ ಸೋರಿಕೆ: ಬೇಹುಗಾರಿಕೆ ಜಾಲ ಪತ್ತೆ ಹಚ್ಚಿದ ಕ್ರೈಂ ಬ್ರಾಂಚ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರ ಹಣಕಾಸು ಸಚಿವಾಲಯಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಬೇಹುಗಾರಿಕೆ ಜಾಲವನ್ನು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಬುಧವಾರ ಪತ್ತೆ ಹಚ್ಚಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಯೊಬ್ಬರು, ಗುತ್ತಿಗೆ ಉದ್ಯೋಗಿ ಸುಮಿತ್, ಡೇಟಾ ಎಂಟ್ರಿ ಆಪರೇಟರ್ ಹಣದ ಬದಲಿಗೆ ಬೇಹುಗಾರಿಕೆ ಚಟುವಟಿಕೆಗಳಿಗಾಗಿ ಮತ್ತು ವಿದೇಶಗಳಿಗೆ ವರ್ಗೀಕೃತ ಡೇಟಾವನ್ನು ಒದಗಿಸಿದ್ದು, ಆತನನ್ನು ಬಂಧಿಸಲಾಗಿದೆ.

ಸಚಿವಾಲಯಕ್ಕೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಹಂಚಿಕೊಳ್ಳಲು ಬಳಸುತ್ತಿದ್ದ ಒಂದು ಮೊಬೈಲ್ ಫೋನ್ ಅನ್ನು ಆತನ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ.ಬಜೆಟ್‌ಗೆ ಸಂಬಂಧಿಸಿದ ಡೇಟಾದ ಸೋರಿಕೆ ಮಾರುಕಟ್ಟೆಯಲ್ಲಿ ದೊಡ್ಡ ಪ್ರಭಾವ ಬೀರಬಹುದು ಎಂದು ಹೇಳಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!