ಹೊಸದಿಗಂತ ಡಿಜಿಟಲ್ ಡೆಸ್ಕ್ :
ಗೋವಾ-ಮುಂಬೈ ಹೆದ್ದಾರಿಯಲ್ಲಿ ಕಾರೊಂದು ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಗು ಮತ್ತು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.
ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ರಾಯಗಢ ಜಿಲ್ಲೆಯ ರೆಪೋಲಿ ಪ್ರದೇಶದಲ್ಲಿ ಗೋವಾ-ಮುಂಬೈ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ.
ಮೃತರಲ್ಲಿ ಐವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಸಂಚಾರ ಪುನರಾರಂಭಗೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ
ಟ್ರಕ್ ಮುಂಬೈ ಕಡೆಗೆ ಚಲಿಸುವಾಗ ಕಾರು ರತ್ನಗಿರಿ ಜಿಲ್ಲೆಯ ಗುಹಾಗರ್ ಕಡೆಗೆ ತೆರಳುತ್ತಿತ್ತು. ಕಾರಿನ ಅವಶೇಷಗಳು ಭಾರೀ ಪ್ರಮಾಣದಲ್ಲಿ ಹಾಳಾಗಿದ್ದು, ಇದನ್ನು ಗಮನಿಸಿದರೇ ಅಪಘಾತದ ತೀವ್ರತೆ ಅರ್ಥವಾಗುತ್ತದೆ.