ಲಂಚ ಕೇಳಿ ತಗಲಾಕ್ಕೊಂಡ ಎಎಸ್‌ಐ ಅಧಿಕಾರಿ: ಮುಂದಾಗಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ 15,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ದೇವನಹಳ್ಳಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅಮಾನತುಗೊಂಡಿದ್ದಾರೆ.

ಯಲಹಂಕದ ನಾರಾಯಣ ಸ್ವಾಮಿ ಎಂಬುವರು ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದು, ಆಕೆ ಆತನ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ದೂರಿನ ಮೇರೆಗೆ ಎಎಸ್‌ಐ ಗೋಪಾಲ ಕೃಷ್ಣ ಅವರು 10 ದಿನಗಳ ಹಿಂದೆ ಸ್ವಾಮಿಯನ್ನು ವಿಚಾರಣೆಗೆ ಕರೆಸಿ, ಸ್ವಾಮಿಯ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿರುತ್ತಾರೆ. ವಾಹನ ಬಿಡಿಸಿಕೊಳ್ಳಲು ಸ್ವಾಮಿಗೆ 15 ಸಾವಿರ ಲಂಚದ ಬೇಡಿಕೆಯಿಟ್ಟಿದ್ದಾರೆ.

ಸ್ವಾಮಿ ಅವರು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಅನೂಪ್ ಎ ಶೆಟ್ಟಿ ಅವರನ್ನು ಸಂಪರ್ಕಿಸಿ ಕೃಷ್ಣ ವಿರುದ್ಧ ಅರ್ಜಿ ಸಲ್ಲಿಸಿದ್ದು, ಶೆಟ್ಟಿ ಅವರು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಎಎಸ್‌ಐ ಲಂಚಕ್ಕೆ ಬೇಡಿಕೆ ಇಟ್ಟಿರುವುದು ವಿಚಾರಣೆ ವೇಳೆ ದೃಢಪಟ್ಟಿರುವ ಹಿನ್ನೆಲೆ ಉಪ ಪೊಲೀಸ್ ಆಯುಕ್ತ (ಈಶಾನ್ಯ) ಅನೂಪ್ ಎ ಶೆಟ್ಟಿ ಕೃಷ್ಣ ಅವರನ್ನು ಅಮಾನತುಗೊಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!