ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂಬ ಕನ್ನಡಿಗರ ಹೋರಾಟಕ್ಕೆ ಜಯ ಸಿಕ್ಕಿದೆ.
ಸಿಬ್ಬಂದಿ ನೇಮಕಾತಿ ಆಯೋಗ 2023ರ ನೇಮಕಾತಿಯ 11,400 ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ಬೆರಯಲು ಇದೇ ಮೊದಲ ಬಾರಿಗೆ ಅವಕಾಶ ಕೊಡಲಾಗಿದೆ. ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಬಹುದು.
ಎಸ್‌ಎಸ್‌ಸಿ ನಡೆಸುವ ಪರೀಕ್ಷೆಗಳು ಕನ್ನಡ ಸೇರಿದಂತೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿಯೇ ಇರಬೇಕು ಎನ್ನುವುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿತ್ತು. ಈ ಹೋರಾಟಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.