ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿರಿಯಾದ ಅಲೆಪ್ಪೊ ನಗರದಲ್ಲಿ ನೆಮ್ಮದಿಯಿಂದ ಮನೆಯಲ್ಲಿ ನಿದ್ರಿಸುತ್ತಿದ್ದವರು ಸದ್ದಿಲ್ಲದೇ ಮೃತಪಟ್ಟಿದ್ದಾರೆ.
ಬೆಳಗಿನ ಜಾವ ಕಟ್ಟಡ ಕುಸಿದು ಬಿದ್ದಿದ್ದು, ಮಗು ಸೇರಿ 16 ಮಂದಿ ಮೃತಪಟ್ಟಿದ್ದಾರೆ.
ಐದು ಅಂತಸ್ತಿನ ಕಟ್ಟಡ ಕುಸಿದಿದ್ದು, ಕಟ್ಟದಲ್ಲಿ ಕನಿಷ್ಟ 30 ಮಂದಿ ವಾಸವಿದ್ದರು. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
ನೀರು ಸೋರಿಕೆಯಿಂದಾಗಿ ಕಟ್ಟಡದ ಅಡಿಪಾಯವು ಶಿಥಿಲಗೊಂಡಿತ್ತು ಎನ್ನಲಾಗಿದೆ.