ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ. ಗೋಪಾಲಯ್ಯ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೋಪಾಲಯ್ಯ ಅವರನ್ನು ಮುಂದುವರೆಸಲಾಗಿದೆ. ಮಂಡ್ಯ ಜಿಲ್ಲೆಗೆ ಆರ್. ಅಶೋಕ್ ಅವರನ್ನು ನೇಮಕ ಮಾಡಲಾಗಿದೆ.