ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ.
ದಕ್ಷಿಣ ಆಫ್ರಿಕಾದ ಆಡಳಿತ ರಾಜಧಾನಿ ಪ್ರಿಟೋರಿಯಾ ಬಳಿಯ ಪಟ್ಟಣದಲ್ಲಿರುವ ಬಾರ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಗುಂಡೇಟಿನಿಂದ ಇನ್ನೂ 14 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದುವರೆಗೂ ಪೊಲೀಸರು ಗಾಯಾಳುಗಳ ಬಗ್ಗೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಪ್ರಿಟೋರಿಯಾದ ಪಶ್ಚಿಮದಲ್ಲಿರುವ ಸೌಲ್ಸ್‌ವಿಲ್ಲೆ ಟೌನ್‌ಶಿಪ್‌ನಲ್ಲಿರುವ ಲೈಸೆನ್ಸ್ ಪಡೆಯದ ಬಾರ್‌ನಲ್ಲಿ ಗುಂಡಿನ ದಾಳಿ ನಡೆದಿದೆ.
ಮೃತರಾದವರಲ್ಲಿ ಮೂವರು ಮಕ್ಕಳು ಕೂಡ ಸೇರಿದ್ದಾರೆ. 3 ವರ್ಷದ ಬಾಲಕ, 12 ವರ್ಷದ ಬಾಲಕ ಮತ್ತು 16 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ. ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

