ಹೊಸದಿಗಂತ ಡಿಜಿಟಲ್ ಡೆಸ್ಕ್:
ಎದೆನೋವಿನ ಹಿನ್ನೆಲೆ ಬಾಲಿವುಡ್ ನಟ ಅಣ್ಣು ಕಪೂರ್ ಅವರು ಗುರುವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಣ್ಣು ಕಪೂರ್ ಅವರನ್ನು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಪೂರ್ ಆರೋಗ್ಯ ಪ್ರಸ್ತುತ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಅಜಯ್ ಸ್ವರೂಪ್ ಮಾಹಿತಿ ನೀಡಿದ್ದಾರೆ.