ಹೊಸದಿಗಂತ ಡಿಜಿಟಲ್ ಡೆಸ್ಕ್ :
ಗಡಿ ಭದ್ರತಾ ಪಡೆಯಲ್ಲಿ 64 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಫೆಬ್ರವರಿ 22,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯೃಥಿಗಳಿಗೆ ತಿಂಗಳಿಗೆ 21,700/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 22,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.