ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು ಮುಂದಿನ ದಿನಗಳಲ್ಲಿ ಸರಕಾರದಿಂದ ಹೆಚ್ಚಿನ ಅನುದಾನ ಒದಗಿಸಲಾಗುವುದು. ಈ ಮೂಲಕ ಇಲ್ಲಿನ ಆರ್ಥಿಕತೆಗೆ ಆರ್ಥಿಕತೆಗೆ ಉತ್ತೇಜನ ನೀಡಲಾಗುವುದು. ಕರಾವಳಿ ಕರ್ನಾಟಕದ ಅಭಿವೃದ್ಧಿಗೆ 1,50,000 ಕೋ. ರೂ. ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಅವರು ಶುಕ್ರವಾರ ಕಾರ್ಕಳ ತಾಲೂಕಿನ ಬೈಲೂರು ಥೀಮ್ ಪಾರ್ಕ್ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ ಸೃಷ್ಟಿಕರ್ತನಿಗೆ ಬೈಲೂರಿನಲ್ಲಿ ಪ್ರತಿಮೆ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ. ಸಚಿವ ಸುನೀಲ್ ಕುಮಾರ್ ಕಾರ್ಕಳದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡುವ ಮೂಲಕ ಇತಿಹಾಸ ಬರೆದಿದ್ದಾರೆ ಎಂದು ಬೊಮ್ಮಾಯಿಯವರು ಶ್ಲಾಘಿಸಿದರು.
ಈ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.