Monday, December 8, 2025

ಗೋವಾ ನೈಟ್ ಕ್ಲಬ್‌ ಅಗ್ನಿ ದುರಂತ: ಸಾವಿನ ಸಂಖ್ಯೆ 25ಕ್ಕೆ ಏರಿಕೆ, 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋವಾದ ಉತ್ತರ ಭಾಗದಲ್ಲಿ ನಡೆದ ಭೀಕರ ಅಗ್ನಿ ಅವಘಡ ಇಡೀ ದೇಶವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಅರ್ಪೋರಾದ ರೋಮಿಯೋ ಲೇನ್ ಪ್ರದೇಶದಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 25ಕ್ಕೆ ಏರಿಕೆಯಾಗಿದೆ. ಗಾಯಗೊಂಡವರಿಗೆ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದುರಂತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರಧಾನಿ ಕಚೇರಿ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ. ಘಟನೆ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಸಹಾಯ ಒದಗಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್ ಮುಚ್ಚುವ ಸಿದ್ಧತೆ ನಡೆಯುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಅಡುಗೆಮನೆಯ ಬಳಿ ಇದ್ದ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

error: Content is protected !!