ಹೊಸದಿಗಂತ ಡಿಜಿಟಲ್ ಡೆಸ್ಕ್ :
ಖ್ಯಾತ ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಲೋಕಾರ್ಪಣೆ ಮಾಡಿದರು.
ಮೈಸೂರಿನ ಮಾನಂದವಾಡಿ ರಸ್ತೆಯ ಹಾಲಾಳು ಗ್ರಾಮದ ಉದ್ಬೂರ್ ಗೇಟ್ ಬಳಿ ನಿರ್ಮಿಸಲಾದ ಸ್ಮಾರಕದಲ್ಲಿ ʼಆಪ್ತರಕ್ಷಕʼ ಚಲನಚಿತ್ರದ ಪಾತ್ರದ ಮಾದರಿಯಲ್ಲಿ 7 ಅಡಿ ಎತ್ತರದಲ್ಲಿ ನಿರ್ಮಿಸಲಾದ ಶಿಲ್ಪವನ್ನು ಅವರು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಬೊಮ್ಮಾಯಿ, “ವಿಷ್ಣುವರ್ಧನ್ ಒಬ್ಬ ಮೇರು ನಟ. 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಸ್ಮಾರಕವನ್ನು ಇಂದು ಲೋಕಾರ್ಪಣೆ ಮಾಡಿದ್ದೇವೆ, ಈ ಮೂಲಕ ಅವರ ಕುಟುಂಬ ಮತ್ತು ಅಭಿಮಾನಿಗಳ ಆಸೆ ಇಡೇರಿದೆ” ಎಂದರು.
ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್, ಅಳಿಯ ಅನುರುದ್ಧ್, ಪುತ್ರಿ ಕೀರ್ತಿ, ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ ದೇವೇಗೌಡ, ಎಸ್ೆ ರಾಮದಾಸ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.