ಹೊಸದಿಗಂತ ಡಿಜಿಟಲ್ ಡೆಸ್ಕ್ :
2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದಿನ ಸೋಮವಾರ (ಫೆಬ್ರವರಿ 6) ವಿಚಾರಣೆ ನಡೆಸಲಿದೆ.
ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪೀಠದ ಮುಂದೆ ಆರಂಭಿಕ ವಿಚಾರಣೆಗೆ ವಿಷಯವನ್ನು ವಕೀಲ M.L.ಶರ್ಮಾ ಪ್ರಸ್ತಾಪಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂ ಒಪ್ಪಿಗೆ ನೀಡಿದೆ. ಈ ಕುರಿತು ಸುಪ್ರೀಂ ಫೆಬ್ರವರಿ 6ಕ್ಕೆ ವಿಚಾರಣೆ ನಡೆಸಲಿದೆ.