ಫ್ಲೋರಿಡಾದಲ್ಲಿ ಮತ್ತೆ ಗುಂಡಿನ ದಾಳಿ, 10 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ದಿನೇ ದಿನೆ ಶೂಟೌಟ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಫ್ಲೋರಿಡಾದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಗುಂಡಿನ ದಾಳಿಗೆ 10 ಮಂದಿ ಗಾಯಗೊಂಡಿದ್ದಾರೆ.

ಇದರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ನಾಲ್ವರು ಕಾರ್‌ನಲ್ಲಿ ಬಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿರುವ ವಾಹನಗಳಲ್ಲಿ ಕುಳಿತು ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗುತ್ತಿದ್ದಾರೆ. ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಗಾಯಗೊಂಡವರು 20-25 ವರ್ಷ ವಯಸ್ಸಿನ ಯುವಕರಾಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!