ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ರಾಜ್ಯ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದಲ್ಲಿ 39 ಎಸ್ಡಿಎ, ಎಫ್ಡಿಎ, ಕಚೇರಿ ಸಹಾಯಕ, ಸಿಬ್ಬಂದಿ ಮೇಲ್ವಿಚಾರಕ, ಲೆಕ್ಕ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಪಿಯುಸಿ, ಎಸ್ಎಸ್ಎಲ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮತ್ತು ಫೆಬ್ರವರಿ 7,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,600/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆಫ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಫೆಬ್ರವರಿ 7,2023ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.