ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ವಿಮಾನದಲ್ಲಿ (air india) ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾಗೆ (Shankar Mishra) ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸೋಮವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಿಶ್ರಾ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.ಇಂದು 1 ಲಕ್ಷ ರೂ. ಬಾಂಡ್ ಮತ್ತು ಅಂತಹ ಮೊತ್ತದ ಒಂದು ಶ್ಯೂರಿಟಿ ಮೇಲೆ ಜಾಮೀನು ನೀಡಲಾಯಿತು.
ಜನವರಿ 7 ರಂದು ಬೆಂಗಳೂರಿನಲ್ಲಿ ಮಿಶ್ರಾ ಬಂಧನವಾಗಿತ್ತು.