ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ನೂತನ ಟಿ20 ಬ್ಯಾಟ್ಸ್ಮನ್ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಾರಿ ಕೂಡ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಬರೋಬ್ಬರಿ 910 ಅಂಕಗಳಿಸುವ ಮೂಲಕ ಸ್ಥಾನ ಭದ್ರಗೊಳಿಸಿದ್ದಾರೆ.
ಐಸಿಸಿ ಟಿ20 ರ‍್ಯಾಂಕಿಂಗ್ ಇತಿಹಾಸದಲ್ಲೇ ಅತ್ಯಧಿಕ ಪಾಯಿಂಟ್ ಕಲೆಹಾಕಿದ ಭಾರತೀಯ ಆಟಗಾರ ಎಂಬ ಸಾಧನೆಯನ್ನು ಸೂರ್ಯಕುಮಾರ್ ಯಾದವ್ ಮಾಡಿದ್ದಾರೆ. ಇದರ ಜೊತೆಗೆ ಶ್ರೇಯಾಂಕದಲ್ಲಿ 909 ಕ್ಕಿಂತ ಅಧಿಕ ಅಂಕ ಪಡೆದ ವಿಶ್ವದ 2ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಸೂರ್ಯ ಪಾತ್ರರಾಗಿದ್ದಾರೆ.
ಡೇವಿಡ್ ಮಲಾನ್ ಒಟ್ಟು 915 ಪಾಯಿಂಟ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ ರ‍್ಯಾಂಕಿಂಗ್ ಇತಿಹಾಸದಲ್ಲೇ ಅತೀ ಹೆಚ್ಚು ಅಂಕ ಪಡೆದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ 910 ಪಾಯಿಂಟ್ಗಳಿಸಿರುವ ಸೂರ್ಯಕುಮಾರ್ 6 ಅಂಕಗಳನ್ನು ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಈ ಮೂಲಕ ಡೇವಿಡ್ ಮಲಾನ್ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯುವ ನಿರೀಕ್ಷೆಯಿದೆ.
ಉಳಿದ ಸ್ಥಾನಗಳಲ್ಲಿ ಈ ಆಟಗಾರರರು ಇದ್ದಾರೆ. ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) – 836 ಅಂಕಗಳು, ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕಗಳು, ಬಾಬರ್ ಆಜಂ (ಪಾಕಿಸ್ತಾನ್) – 778 ಅಂಕಗಳು, ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) – 748 ಅಂಕಗಳು.