ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಭೇಟಿಗೆ ಆಹ್ವಾನ ನೀಡಿದ್ದಾರೆ. ಆಹ್ವಾನಕ್ಕೆ ಪ್ರಧಾನಿ ಮೋದಿ ಒಪ್ಪಿಗೆ ಸೂಚಿಸಿದ್ದು, ಉಭಯ ದೇಶದ ಅಧಿಕಾರಿಗಳು ಸೂಕ್ತ ದಿನಾಂಕವನ್ನು ನಿರ್ಧರಿಸಲಿದ್ದಾರೆ.
ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. ಈ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಭಾಗವಹಿಸಲಿದ್ದಾರೆ. ಶೃಂಗಸಭೆಗೂ ಮುನ್ನ ಅಮೆರಿಕ ಭೇಟಿಗೆ ದಿನಾಂಕವನ್ನು ಹುಡುಕಲಾಗುತ್ತದೆ. ಜೂನ ಅಥವಾ ಜುಲೈನಲ್ಲಿ ಪ್ರಧಾನಿ ಮೋದಿ ಜೋ ಬಿಡೆನ್ ಅವರನ್ನು ಭೇಟಿ ಮಾಡಲಿದ್ದಾರೆ.