ಬಂಟ್ವಾಳದ ಎಲೆಕ್ಟ್ರಾನಿಕ್ಸ್ ಅಂಗಡಿ, ಬ್ಯಾಟರಿ ಸ್ಕೂಟರ್ ಮಳಿಗೆ ಮಾಳಿಗೆಯಲ್ಲಿ ಭೀಕರ ಅಗ್ನಿದುರಂತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಂಟ್ವಾಳದ ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನೀಚರ್ಸ್ ಮತ್ತು ಕೊಮಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ನ ಮಳಿಗೆಯ ಮಾಳಿಗೆಯಲ್ಲಿ ಗುರುವಾರ ಬೆಳಗ್ಗೆ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ.

ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯಿಸಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿರಬಹುದು ಎನ್ನಲಾಗುತ್ತಿದೆ. ಸ್ಥಳೀಯ ವಿಜಯಲಕ್ಷ್ಮೀ ಸ್ಟೀಲ್ಸ್ ನ ರಾಘವೇಂದ್ರ ಸಹಿತ ಸಿಬ್ಬಂದಿ ವರ್ಗ, ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಸಹಕರಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!