ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಜನತೆಯ ಚಿತ್ತ ಶಿವಮೊಗ್ಗದ ನೂತನ ವಿಮಾನ ನಿಲ್ದಾಣದತ್ತ. ಉದ್ಘಾಟನೆಗೆ ಸಿದ್ಧಗೊಂಡಿರುವ ಶಿವಮೊಗ್ಗದ ವಿಮಾನ ನಿಲ್ದಾಣವನ್ನು ನೋಡುವ ಭಾಗ್ಯ ಈಗ ಸಿಕ್ಕಿದೆ.
ಅದ್ಹೇಗೆ ಅಂತೀರಾ!.. ವಿಮಾನ ನಿಲ್ದಾಣದ ವಿಡಿಯೋವನ್ನು ಸಂಸದ ಬಿ. ವೈ. ರಾಘವೇಂದ್ರ ಟ್ವೀಟ್ ಮಾಡಿದ್ದಾರೆ. ನೀವು ಒಮ್ಮೆ ನೋಡಿ ಕಣ್ತುಂಬಿಕೊಳ್ಳಬಹುದು.
“ಶಿವಮೊಗ್ಗ ಜಿಲ್ಲೆಯ ಜನರ ಬಹುನಿರೀಕ್ಷೆಯ ವಿಮಾನ ನಿಲ್ದಾಣದ ಕನಸು ಇದೀಗ ಸಾಕಾರಗೊಂಡು ಉದ್ಘಾಟನೆಯ ಹೊಸ್ತಿಲಲ್ಲಿದೆ.ಇದೇ ಫೆಬ್ರವರಿ 27 ರಂದು ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ”. ಎಂದು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.
ಅದಲ್ಲದೆ 662.38 ಎಕರೆ ಪ್ರದೇಶದಲ್ಲಿ 449 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಅತ್ಯಂತ ಸುಸಜ್ಜಿತ ವಿಮಾನನಿಲ್ದಾಣದಿಂದಾಗಿ ಶಿವಮೊಗ್ಗ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರ್ಥಿಕ ಉತ್ತೇಜನ ದೊರೆತು ಅಭಿವೃದ್ಧಿಯ ಹೊಸ ಭಾಷ್ಯವನ್ನು ಬರೆಯಲಿದೆ ಎಂದು ಕೂಡ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಪರ್ವಕ್ಕೆ ವಿಮಾನ ನಿಲ್ದಾಣವು ವಿಶಿಷ್ಟ ಕೊಡುಗೆಯನ್ನು ನೀಡಲಿದೆ
ಎಂದು ಬಿ. ವೈ. ರಾಘವೇಂದ್ರ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಜನರ ಬಹುನಿರೀಕ್ಷೆಯ ವಿಮಾನ ನಿಲ್ದಾಣದ ಕನಸು ಇದೀಗ ಸಾಕಾರಗೊಂಡು ಉದ್ಘಾಟನೆಯ ಹೊಸ್ತಿಲಲ್ಲಿದೆ.
ಇದೇ ಫೆಬ್ರವರಿ 27 ರಂದು ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.@BSYBJP @BSBommai @BJP4Karnataka#ShivamoggaAirport pic.twitter.com/VsHl2px5FU
— B Y Raghavendra (@BYRBJP) February 2, 2023