ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಸೋದಕ್ಕೆ ಒಪ್ಪಿಗೆ ಇಲ್ಲ ಎಂದು ಎಷ್ಟು ಬಾರಿ ಹೇಳಿದರೂ ಪಾಗಲ್ ಪ್ರೇಮಿಯ ಟಾರ್ಚರ್ ಸಹಿಸಲಾಗದೆ ದಂತ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಸಂಜಯ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕಾನ್ಪುರ ಮೂಲದ ಪ್ರಿಯಾನ್ಶಿ ತ್ರಿಪಾಠಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಿಯಾನ್ಶಿ ತಂದೆ ದೂರಿನ ಮೇಲೆ ವೈದ್ಯ ಸುಮಿತ್ ವಿರುದ್ಧ ಪ್ರಕರಣ ದಾಖಲಾಗಿದೆ.
ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಿಯಾನ್ಶಿಗೆ ಸುಮಿತ್ ಪ್ರೀತಿಸುವಂತೆ ಬೇಡಿಕೆ ಇಟ್ಟಿದ್ದ. ಪ್ರಿಯಾನ್ಶಿ ಇದಕ್ಕೆ ನಿರಾಕರಿಸಿದ್ದರು. ಪ್ರೀತಿಗೆ ಒಪ್ಪದ ಹಿನ್ನೆಲೆ ಆಸ್ಪತ್ರೆಯಲ್ಲಿ ಪ್ರಿಯಾನ್ಶಿ ನಡವಳಿಕೆ ಸರಿ ಇಲ್ಲ ಎಂದು ಸುದ್ದಿ ಹಬ್ಬಿಸಿದ್ದ. ಇದರಿಂದ ಮನನೊಂದು ಪ್ರಿಯಾನ್ಶಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.