ದೆಹಲಿ ಮದ್ಯ ನೀತಿ ಹಗರಣ: ಎಲ್ಲಾ ಆರೋಪಿಗಳಿಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮದ್ಯ ನೀತಿ ಹಗರಣಕ್ಕೆ (Delhi Liquor Policy Case) ಸಂಬಂಧಿಸಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ಅನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪೂರಕ ಚಾರ್ಜ್ ಶೀಟ್ ನಲ್ಲಿ ವಿಜಯ್ ನಾಯರ್, ಶರತ್ ರೆಡ್ಡಿ, ಬಿನಾಯ್ ಬಾಬು, ಅಭಿಷೇಕ್ ಬೋನಪಲ್ಲಿ ಮತ್ತು ಅಮಿತ್ ಅರೋರಾ ಹೆಸರಿದ್ದು, ಆದರೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಹೆಸರು ಇಲ್ಲ ಎಂದು ತಿಳಿದು ಬಂದಿದೆ.

ಪ್ರಕರಣದ ಎಲ್ಲಾ ಐದು ಆರೋಪಿಗಳಿಗೆ ಸಮನ್ಸ್ ನೀಡಿದ್ದು, ಫೆ.23, ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here