ಕೇಂದ್ರೀಯ ಲೋಕಸೇವಾ ಆಯೋಗದಲ್ಲಿ ನಾಗರಿಕ ಸೇವಾ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರೀಯ ಲೋಕಸೇವಾ ಆಯೋಗ 1255 ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರಣ್ಯ ಸೇವೆ ಮತ್ತು ನಾಗರಿಕ ಸೇವೆ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆಯುಳ್ಳ ಮತ್ತು ಆಗಸ್ಟ್‌ 1,2023ರ ಅನ್ವಯ ಕನಿಷ್ಟ 21 ರಿಂದ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಭಾರತೀಯ ಅರಣ್ಯ ಸೇವೆ ಮತ್ತು ನಾಗರಿಕ ಸೇವೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 21,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!