SHOCKING | ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜರ್ಮನಿಯಲ್ಲಿ ಮಕ್ಕಳಿಗೆ ರೈಲು ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದುಹೋದ ಹೃದಯವಿದ್ರಾವಕ ಘಟನೆ ನಡೆದಿದೆ.

ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಎರಡು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತ ಹೇಗಾಯ್ತು? ಮಕ್ಕಳು ಅಲ್ಲಿ ಏಕೆ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿಲ್ಲ.

ಅಪಘಾತದ ಸ್ಥಳಕ್ಕೆ 35 ಅಗ್ನಿಶಾಮಕ ಸಿಬ್ಬಂದಿ ನಿಯೋಜಿಸಲಾಗಿದೆ, ಡ್ರೋನ್ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!