ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಗೋ ವಿಮಾನಯಾನ ಸಂಸ್ಥೆಯು ಸೋಮವಾರ ಕೂಡ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನಲ್ಲಿ 62 ನಿರ್ಗಮನ ಮತ್ತು 65 ಆಗಮನ ಸೇರಿದಂತೆ127 ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ವಿಮಾನಗಳ ಹಾರಾಟದಲ್ಲಿ ಅಡಚಣೆ ಏಳನೇ ದಿನಕ್ಕೆ ಕಾಲಿಟ್ಟಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 75 ನಿರ್ಗಮನ ಮತ್ತು 59 ಆಗಮನ ಸೇರಿದಂತೆ ಒಟ್ಟು 134 ವಿಮಾನಗಳನ್ನು ರದ್ದುಗೊಳಿಸಲಾಗಿದೆ .
ಮತ್ತೊಂದು ಬೆಳವಣಿಗೆಯಲ್ಲಿ, ವಿಮಾನಯಾನ ಸುರಕ್ಷತಾ ನಿಯಂತ್ರಕ ಡಿಜಿಸಿಎ ಭಾನುವಾರ ತಡರಾತ್ರಿ ಆದೇಶವೊಂದರಲ್ಲಿ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಮತ್ತು ಮುಖ್ಯ ಕಾರ್ಯಾಚರಣಾ ಅಧಿಕಾರಿ ಮತ್ತು ವ್ಯವಸ್ಥಾಪಕ ಇಸಿಡ್ರೊ ಪೋರ್ಕ್ವೆರಾಸ್ ಅವರು ವಿಮಾನಯಾನ ಕಾರ್ಯಾಚರಣೆಗಳಲ್ಲಿ ನಡೆಯುತ್ತಿರುವ ಅಡಚಣೆಗಳ ಕುರಿತು ಶೋಕಾಸ್ ನೋಟಿಸ್‌ಗೆ ಉತ್ತರ ಸಲ್ಲಿಸಲು ಸೋಮವಾರ ಸಂಜೆ 6 ಗಂಟೆಯವರೆಗೆ ಸಮಯವನ್ನು ವಿಸ್ತರಿಸಿದೆ.

